ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿದ ಘಟನೆ ನಡೆದಿದೆ.
ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ ಪಿಕೆಪಿಎಸ್ ನಿರ್ದೇಶಕನ ಪತ್ನಿಯೇ ಗಂಡನ ಕೊರಳಪಟ್ಟಿ ಹಿಡಿದು ಮನೆಗೆ ಎಳೆದೊಯ್ದಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಂಘ ಹಾಗೂ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರಕ್ಕೆಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮಕ್ಕೆ ತೆರಳಿದ್ದ ವೇಳೆ ಅಲ್ಲಿನ ಪಿಕೆಪಿಎಸ್ ಕಚೇರಿ ಎದುರು ಮದಿಹಳ್ಳಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಕೊರಳಪಟ್ಟಿ ಹಿಡಿದು ಪತ್ನಿ ಲಗಮವ್ವ ಮನೆಗೆ ಕರೆದೊಯ್ದಿದ್ದಾರೆ.