ಸುಭಾಷಿತ :

Wednesday, April 1 , 2020 2:45 AM

ತವರು ಮನೆಗೆ ಹೋಗಲು ಬಿಡದ ಪತಿ : ಕೋಪದಿಂದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ 


Friday, February 21st, 2020 11:53 am

ರಾಂಚಿ: ತವರು ಮನೆಗೆ ಹೋಗಲು ಪತಿ ಬಿಡಲಿಲ್ಲ ಎಂಬ ಒಂದೇ ಕಾರಣಕ್ಕೆ ಪತ್ನಿಯೊಬ್ಬಳು ಕೋಪದಿಂದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಜಾರ್ಖಂಡ್‍ನ ಗಿರಿಹಿಡ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಪತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ ಪತಿಯ ಮರ್ಮಾಂಗವನ್ನು ಶೇ. 60ರಷ್ಟು ಕತ್ತರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಪತಿ ಎರಡು ದಿನದ ಹಿಂದೆ ಪತ್ನಿ ತವರು ಮನೆಯಿಂದ ಹಿಂತಿರುಗಿದ್ದಳು. ಆದರೆ ಈಗ ಮತ್ತೆ ಹೋಗುತ್ತೇನೆ ಎಂದು ಹಠ ಮಾಡುತ್ತಿದ್ದಳು. ಇದಕ್ಕೆ ಜಗಳ ನಡೆದು,  ಜಗಳ ವಿಕೋಪಕ್ಕೆ ತಿರುಗಿ ಆಕೆ ನನ್ನ ಖಾಸಗಿ ಅಂಗದ ಮೇಲೆ ಹಲ್ಲೆ ಮಾಡಿದ್ದಾಳೆ ಎಂದು ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಪತ್ನಿ, ನಾನು ಪರೀಕ್ಷೆ ಬರೆಯಬೇಕಿತ್ತು. ಹಾಗಾಗಿ ನಾನು ನನ್ನ ತವರು ಮನೆಗೆ ಹೋಗುತ್ತೇನೆ ಎಂದು ಹಠ ಮಾಡಿದ್ದೆ.  ಆದರೆ ಪತಿ ನಿರಾಕರಿಸಿದ್ದ ಎನ್ನಲಾಗಿದೆ.

ಸದ್ಯ ಪೋಲಿಸರು ಈ ಪ್ರಕರಣದ ಬಗ್ಗೆ ಮಹಿಳೆಯನ್ನು ಕೂಡ ವಿಚಾರಣೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions