ಹಾಸನ: ಮಲೆನಾಡು ಭಾಗಗಳಲ್ಲಿ ಕಾಡಾನೆ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಹಾಸನದ ಸಕಲೇಶಪುರ ತಾಲೂಕಿನ ಬೈಕೆರೆ, ನಾರ್ವೆಪೇಟೆ ಗ್ರಾಮದ ಖಾಫಿ ತೋಟಗಳಲ್ಲಿ ಕಾಡಾನೆ ಬೀಡುಬಿಟ್ಟಿವೆ. ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
ಕಾಫಿ ತೋಟದಲ್ಲಿ ದಿನನಿತ್ಯ ಕಾಡಾನೆ ಓಡಾಡುತ್ತಿದ್ದು, ಬಾಳೆ, ಅಡಿಕೆ ಗಿಡಗಳನ್ನು ನಾಶ ಮಾಡಿದೆ.20 ವರ್ಷಗಳಿಂದ ಬೆಳೆದಿದ್ದ ಕಾಫಿ ಗಿಡಗಳನ್ನು ಕಳೆದುಕೊಂಡು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮದ ಗಿಡ್ಡಪ್ಪ, ಚಂದ್ರೇಗೌಡ, ಮಲ್ಲೇಶ್ ಹಾಗೂ ಇತರ ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದೀಗ ಅರಣ್ಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.