ಕಲಬುರಗಿ : ಲೌಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೌಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ. ರೇವಣ್ಣಗೆ ಎಸ್ ಐಟಿ ನೋಟಿಸ್ ಜಾರಿ ಮಾಡಿದೆ. ಇಂದು ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿದ ೪೮ ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ವಿದೇಶದಲ್ಲಿ ಇರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರ ವಿರುದ್ದ ಎಲ್ಲಾ ಏರ್ ಪೋರ್ಟ್ ಗಳಿಗೆ ನೋಟಿಸ್ ನೀಡಿದ್ದೇವೆ ಎಂದು ಹೇಳಿದ್ದಾರೆ.