ಅಮ್ರೋಹಾ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದಾರೆ ಮತ್ತು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಶರಿಯಾ ಕಾನೂನನ್ನು’ ಜಾರಿಗೆ ತರುವ ಮತ್ತು ಜನರ ಆಸ್ತಿಯನ್ನ ಮರುಹಂಚಿಕೆ ಮಾಡುವ ಉದ್ದೇಶವನ್ನ ವ್ಯಕ್ತಪಡಿಸಿದೆ ಎಂದು ಹೇಳಿದರು.
ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಮತ್ತು ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್ ಪ್ರಣಾಳಿಕೆಯನ್ನ ನೋಡಿದ್ರೆ, ಅವರು ಸರ್ಕಾರ ರಚಿಸಿದರೆ, ನಾವು ಶರಿಯಾ ಕಾನೂನನ್ನ ಜಾರಿಗೆ ತರುತ್ತೇವೆ ಎಂದು ಅವರು ಹೇಳುತ್ತಾರೆ. “ನೀವು ಹೇಳಿ, ಈ ದೇಶವನ್ನು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸಲಾಗುತ್ತದೆಯೇ ಅಥವಾ ಶರಿಯತ್’ನಿಂದ ನಡೆಸಲಾಗುತ್ತದೆಯೇ?” ಎಂದು ಅವರು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ರ್ಯಾಲಿಗಳಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜನರ ಆಸ್ತಿಯ ಮರು ಹಂಚಿಕೆಯನ್ನ ಸೇರಿಸಿದೆ ಎಂದು ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ‘ಪಾಕಿಸ್ತಾನ’ಕ್ಕೆ ಪ್ರಯಾಣಿಸುವುದಿಲ್ಲ : BCCI ಮೂಲಗಳು