ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಊಟ ಒಗ್ಗದ ಕಾರಣದಿಂದ ಅವರು ಮನೆ ಊಟ, ಬಟ್ಟೆ, ಪುಸ್ತಕ ಸೇರಿದಂತೆ ಹಲವು ವಸ್ತುಗಳ ಬೇಡಿಕೆಗೆ ರಿಟ್ ಅರ್ಜಿ ಸಲ್ಲಿಸಿದರು. ಇಂದು ಮನೆ ಊಟಕ್ಕೆ ಸಲ್ಲಿಸಿದ ಅರ್ಜಿಯ ಕುರಿತು ತೀರ್ಪು ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಲಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಹಲವಾರು ರೀತಿಯಲ್ಲಿ ತನಿಖೆ ನಡೆಸಿದ್ದು, ಹಲವು ಸಾಕ್ಷಾಧಾರಗಳನ್ನು ಕೂಡ ಸಂಗ್ರಹಿಸಿದ್ದಾರೆ. ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಊಟ ಸೇರುತ್ತಿಲ್ಲ. ಹಾಗಾಗಿ ಅವರು ಮನೆ ಊಟಕ್ಕಾಗಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಒಂದುವರೆ ತಿಂಗಳಿನಿಂದ ಜೈಲಿನಲ್ಲಿ ಇರುವುದರಿಂದ ಸಹಜವಾಗಿ ಅವರು ತೂಕ ಕಳೆದುಕೊಂಡಿದ್ದಾರೆ ಎಂದು ಜೈಲಾಧಿಕಾರಿಗಳು ಕೂಡ ತಿಳಿಸಿದ್ದಾರೆ.
ನಟ ದರ್ಶನ್ ಅವರು ಸಲ್ಲಿಸಿರುವ ರಿಟ್ ಅರ್ಜಿಗೆ ಜೈಲಾಧಿಕಾರಿಗಳು ಹಾಗೂ ಸರ್ಕಾರದ ಎಸ್ಪಿಪಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಕಳೆದ ಬಾರಿ ವಿಚಾರಣೆಯ ವೇಳೆ ಈಗಾಗಲೇ ಜೈಲಿನಲ್ಲಿ 5000 ಖೈದಿಗಳು ಇದ್ದಾರೆ ಅವರೆಲ್ಲರಿಗೂ ಒಂದೇ ರೀತಿ ಊಟ ನೀಡಲಾಗುತ್ತಿದೆ ಅವರಿಗೆ ಆಗದ ಆರೋಗ್ಯ ಸಮಸ್ಯೆ ನಟ ದರ್ಶನವರಿಗೆ ಏಕೆ ಎಂದು ಸರ್ಕಾರದ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.
ಹಾಗಾಗಿ ಇಂದು ಮನೆ ಊಟಕ್ಕೆ ಸಲ್ಲಿಸಿದ ಅರ್ಜಿಯ ಕುರಿತು ತೀರ್ಪು ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಲಿದೆ.ದರ್ಶನ್ ಅವರಿಗೆ ಇಂದಾದರೂ ನ್ಯಾಯಾಲಯ ಮನೆ ಊಟಕ್ಕೆ ಅನುಮತಿ ನೀಡುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಕೂಡ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಅಲ್ಲದೆ ಕಾನೂನು ಹೋರಾಟಕ್ಕೆ ಇಳಿದಿದ್ದರೆ. ಹೀಗಾಗಿ ದರ್ಶನ್ ಜೈಲಿನಿಂದ ಬಿಡುಗಡೆಯಾಗುತ್ತಾರಾ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.