Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING:ತಮಿಳುನಾಡಿನಲ್ಲಿ 60 ಅಡಿ ಎತ್ತರದ ದೇವಾಲಯದ ರಥ ಉರುಳಿ ಏಳು ಭಕ್ತರಿಗೆ ಗಾಯ

17/02/2026 10:55 AM

ಗಮನಿಸಿ : ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

17/02/2026 10:55 AM

ಲವ್ ಮಾಕ್ಟೇಲ್3 ಚಿತ್ರದ `ಒಬ್ಬಂಟಿಯಾದೆ ನಾ’ ಲಿರಿಕಲ್ ವೀಡಿಯೋ ಸಾಂಗ್ ರಿಲೀಸ್ !

17/02/2026 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ‘ಗೌರವ ಧನ’ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ‘ಗೌರವ ಧನ’ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0513/12/2024 5:08 PM

ಬೆಳಗಾವಿ : ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು.

ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ.

ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಗ್ರಾಮ ಪಂಚಾಯತ್ ಆಸ್ತಿಗಳ ಸಮೀಕ್ಷೆ

ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ವಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದರು. ಗ್ರಾಮ ಪಂಚಾಯತ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Share. Facebook Twitter LinkedIn WhatsApp Email

Related Posts

ಗಮನಿಸಿ : ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

17/02/2026 10:55 AM2 Mins Read

ಲವ್ ಮಾಕ್ಟೇಲ್3 ಚಿತ್ರದ `ಒಬ್ಬಂಟಿಯಾದೆ ನಾ’ ಲಿರಿಕಲ್ ವೀಡಿಯೋ ಸಾಂಗ್ ರಿಲೀಸ್ !

17/02/2026 10:47 AM1 Min Read

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

17/02/2026 10:44 AM3 Mins Read
Recent News

BREAKING:ತಮಿಳುನಾಡಿನಲ್ಲಿ 60 ಅಡಿ ಎತ್ತರದ ದೇವಾಲಯದ ರಥ ಉರುಳಿ ಏಳು ಭಕ್ತರಿಗೆ ಗಾಯ

17/02/2026 10:55 AM

ಗಮನಿಸಿ : ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

17/02/2026 10:55 AM

ಲವ್ ಮಾಕ್ಟೇಲ್3 ಚಿತ್ರದ `ಒಬ್ಬಂಟಿಯಾದೆ ನಾ’ ಲಿರಿಕಲ್ ವೀಡಿಯೋ ಸಾಂಗ್ ರಿಲೀಸ್ !

17/02/2026 10:47 AM

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

17/02/2026 10:44 AM
State News
KARNATAKA

ಗಮನಿಸಿ : ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5717/02/2026 10:55 AM KARNATAKA 2 Mins Read

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಕ್ರೆಡಿಟ್ ಕಾರ್ಡ್ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಅವರು ಕ್ರೆಡಿಟ್ ಕಾರ್ಡ್ ಅನ್ನು ಕೈಯಲ್ಲಿ…

ಲವ್ ಮಾಕ್ಟೇಲ್3 ಚಿತ್ರದ `ಒಬ್ಬಂಟಿಯಾದೆ ನಾ’ ಲಿರಿಕಲ್ ವೀಡಿಯೋ ಸಾಂಗ್ ರಿಲೀಸ್ !

17/02/2026 10:47 AM

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

17/02/2026 10:44 AM

ಆಸ್ತಿ ಖರೀದಿದಾರರೇ ಗಮನಿಸಿ : ಭೂಮಿ ಅಥವಾ ಮನೆ : ಹೂಡಿಕೆಗೆ ಯಾವುದು ಉತ್ತಮ?

17/02/2026 10:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.