ಬೆಂಗಳೂರು : ಕನ್ನಡ ಕಿರುತೆರೆ ಮೂಲಕ ಜನಪ್ರಿಯ ಗಳಿಸಿದ್ದ ನಟಿ ವೈಷ್ಣವಿ ಗೌಡ ಅವರ ನಿಶ್ಚಿತಾರ್ಥ ವಿದ್ಯಾಭರಣ್ ಅವರ ಜೊತೆಗೆ ಇತ್ತೀಚೆಗಷ್ಟೇ ನಡೆದಿತ್ತು. ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ, ನಟಿಯೊಬ್ಬರು ವಿದ್ಯಾಭರಣ್ ತಮಗೆ ಮೋಸ ಮಾಡಿರುವುದಾಗಿ ಆರೋಪ ಕೇಳಿಬಂದಿದೆ
ಮೂಗಿನಲ್ಲಿ ಬೆರಳು ತೂರಿಸುವ ಅಭ್ಯಾಸವಿದೆಯೇ? ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾಭರಣ್ ಅವರು, ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು.
ಮೂಗಿನಲ್ಲಿ ಬೆರಳು ತೂರಿಸುವ ಅಭ್ಯಾಸವಿದೆಯೇ? ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ
ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆ ಎಂದು ಕಿಡಿಕಾರಿದ್ದಾರೆ.
ಮೂಗಿನಲ್ಲಿ ಬೆರಳು ತೂರಿಸುವ ಅಭ್ಯಾಸವಿದೆಯೇ? ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ
ನಾಳೆ ಕಮೀಷನರ್ಗೆ ದೂರು ನೀಡುತ್ತೇನೆ. ನನ್ನ ಮೇಲೆ ಇಷ್ಟೆಲ್ಲ ಆರೋಪ ಮಾಡುವ ಬದಲು ಆಕೆಯೇ ಕಂಪ್ಲೆಂಟ್ ಕೊಡಬಹುದಿತ್ತು. ನಮ್ಮ ಏಳಿಗೆಯನ್ನು ಸಹಿಸಲು ಸಾಧ್ಯವಾಗದೇ ಇರುವ ಹಿತಶತ್ರುಗಳು ಹೀಗೆ ಮಾಡುತ್ತಿದ್ದಾರೆ. ನಾನು ಇನ್ಸ್ಟಾಗ್ರಾಮ್ ಅನ್ನು ಮೊದಲೇ ಡಿಲೀಟ್ ಮಾಡಿದ್ದೇನೆ. ನನ್ನ ಇನ್ಸ್ಟಾಗ್ರಾಮ್ ಹ್ಯಾಕ್ ಆಗಿತ್ತು. ತುಂಬಾ ಹಿಂದೆಯೇ ಡಿಲೀಟ್ ಆಗಿದೆ. ಇಂತಹ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಮೂಗಿನಲ್ಲಿ ಬೆರಳು ತೂರಿಸುವ ಅಭ್ಯಾಸವಿದೆಯೇ? ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ
ನನ್ನ ರೀತಿ ಬೇರೆ ಯಾವ ಹುಡುಗನಿಗೂ ಹೀಗೆ ಆಗಬಾರದು. ಇವತ್ತು ಬುದ್ಧಿ ಕಲಿಸಿಲ್ಲ ಅಂದರೆ, ನಾಳೆ ಇದೇ ರೀತಿ ಸಾಕಷ್ಟು ಜನರಿಗೆ ಆಗುತ್ತದೆ. ನಾನು ಮೂರು ತಿಂಗಳು ಯಾವ ಹುಡುಗಿಯನ್ನು ಕೂಡ ಕರೆದುಕೊಂಡು ಬಂದಿಲ್ಲ. ನೇರವಾಗಿ ಬಂದು ದೂರು ಕೊಡದೇ ಈ ರೀತಿ ಮಾಡಿರುವುದರಿಂದ ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.