ಬೆಂಗಳೂರು: ದೇವರಾಜೇಗೌಡ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಅವರು ಟ್ವಿಟರ್ ಈ ಬಗ್ಗೆ ಹೇಳಿದ್ದು, ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ.
ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿಕೆ ಶಿವಕುಮಾರ್, ಕೃಷ್ಣ ಭೈರೇಗೌಡ ಹಾಗೂ ಪ್ರಿಯಾಂಕ್ ಖರ್ಗೆ ಅವರುಗಳ ಮೇಲು ಸಹ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ದೇವರಾಜೇಗೌಡ ಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನ ನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ.
ಪ್ರಕರಣದ ಬಗ್ಗೆ ಎಸ್.ಐ.ಟಿ ತನಿಖೆ ನಡೆಸುತ್ತಿದ್ದು ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ ಅಂತ ಹೇಳಿದ್ದಾರೆ.