ಶಿವಮೊಗ್ಗ : ಲೋಕಸಭಾ ಚುನಾವಣೆಗೆ ತಮ್ಮ ಮಾನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ಆಗಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರಕ್ಕೆ ಲೋಕಸಭ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12 ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಘೋಷಿಸಿದ್ದಾರೆ.
UPDATE : ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ‘BMTC’ ಕಂಡೆಕ್ಟರ್ ಪೊಲೀಸ್ ವಶಕ್ಕೆ
ಇಂದು ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಏಪ್ರಿಲ್ 12 ರಂದು ಸುಮಾರು 25 ಸಾವಿರ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು.
BREAKING : ಪಂಜಾಬ್ ಮಾಜಿ ಸಿಎಂ ಬಿಯಾಂತ್ ಸಿಂಗ್ ಮೊಮ್ಮಗ, ಸಂಸದ ‘ರವ್ನೀತ್’ ಬಿಜೆಪಿಗೆ ಸೇರ್ಪಡೆ
ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ನನ್ನ ಗುರುತು ಕೂಡ ಇನ್ನೂ ತೀರ್ಮಾನವಾಗಿಲ್ಲ. ಮತದಾನದ ದಿನಾಂಕ ನಿಗದಿಯಾಗಿದೆ. ಆದ್ದರಿಂದ ಏಪ್ರಿಲ್ 12ರಂದು ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವೆ. ಈ ರೀತಿ ಘೋಷಿಸಿದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಎದೆಯಲ್ಲಿ ನಡುಕ ಆರಂಭವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ಇಳಿದಾಗಿದೆ ಎಂದು ಸಮಾವೇಶದಲ್ಲಿ ಕೆ. ಎಸ್ ಈಶ್ವರಪ್ಪ ಘೋಷಿಸಿದರು.