ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ ರಾಜ್ಯದ ಒಂದು ಪ್ರಮುಖ ಕ್ಷೇತ್ರ ಎಂದು ಹೇಳಲಾಗುತ್ತದೆ. ಏಕೆಂದರೆ ಇದೀಗ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ಬೆಂಬಲಿಸಿರುವ ಸುಮಲತಾ ಅಂಬರೀಶ್ ಗೆ ಟಿಕೇಟ್ ನೀಡಬೇಕೋ ಅಥವಾ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿಗೆ ನೀಡಬೇಕೋ ಎಂಬುವುದು ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿದೆ.ಇದರ ಬೆನ್ನಲ್ಲೆ ಇದೀಗ ಸುಮಲತಾ ಅಂಬರೀಶ್ ಲೋಕಸಭಾ ಅವಧಿ ಮುಗಿದ ಬಳಿಕ ಬಿಜೆಪಿ ಪಕ್ಷಕ್ಕೆ ಸೇರುತ್ತೇನೆ ಎಂದು ತಿಳಿಸಿದ್ದಾರೆ.
ಸಿರಿಯಾ ಟ್ರಫಲ್ ಬೇಟೆಗಾರರ ಮೇಲೆ ‘ಐಎಸ್’ ದಾಳಿ: 18 ಸಾವು, 50 ಕ್ಕೂ ಹೆಚ್ಚು ಮಂದಿ ನಾಪತ್ತೆ
ಲೋಕಸಭಾ ಚುನಾವಣೆಯಲ್ಲಿ ರೆಕಾರ್ಡ್ ಪಟ್ಟಿ, ಕೆಲಸ ನೋಡಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅದಕ್ಕೆ ನನಗೆ ಮೈತ್ರಿ ಟಿಕೆಟ್ ಸಿಗುವ ಬಗ್ಗೆ ಪೂರ್ಣ ವಿಶ್ವಾಸವಿದೆ. ಲೋಕಸಭಾ ಅವಧಿ ಮುಗಿದ ಬಳಿಕ ನಾನು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತೇನೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವುದರಿಂದ ಇಷ್ಟು ದಿನ ಸೇರಲಾಗುತ್ತಿಲ್ಲ ಎಂದು ಸಂಸದೆ ಸುಮಲತಾ ತಿಳಿಸಿದರು.
ಬಿಜೆಪಿ ಪಕ್ಷ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಯಾವುದೂ ಫೈನಲ್ ಆಗುವುದಿಲ್ಲ. ಟಿಕೆಟ್ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ಅದು ನನ್ನ ವೈಯಕ್ತಿಕ. ಆದರೆ, ಪಕ್ಷದಿಂದ ಬರುವುದೇ ಅಧಿಕೃತ ಘೋಷಣೆ. ಕಳೆದ ಎಂಪಿಗಳು ಮಾಡಿರುವ ಕೆಲಸಕ್ಕೂ ನನ್ನ ಕೆಲಸಕ್ಕೂ ವ್ಯತ್ಯಾಸವಿದೆ. ಬಿಜೆಪಿ ಸಿದ್ಧಾಂತ, ನರೇಂದ್ರ ಮೋದಿ ಕೆಲಸದ ರೀತಿ ನೋಡಿ ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ ಎಂದರು.
ಕೆಜಿಗೆ 500 ರುಪಾಯಿಗೆ ಏರಿದ್ದ ‘ಬೆಳ್ಳುಳ್ಳಿ’ ಬೆಲೆಯಲ್ಲಿ ಭಾರಿ ಇಳಿಕೆ : ಪ್ರಸ್ತುತ ದರ ಎಷ್ಟು?