ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರಾಜನ ಮೇಲೆ ಭಂಗ ಬೀರಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದವರ ಬದಲಾವಣೆ ಆಗಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ನುಡಿದಿದ್ದರು. ಮುಡಾ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯಗೆ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ಶ್ರೀಗಳ ಭವಿಷ್ಯ ನಿಜವಾಗುತ್ತಾ ಎನ್ನುವ ಆತಂಕ ಎಲ್ಲರಲ್ಲಿದೆ.
ಹೌದು ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಪ್ರಾಕೃತಿಕ ಸ್ಥಿತಿಗತಿ ಮತ್ತು ಸರ್ಕಾರದ ಬಗ್ಗೆ ಅವರು ಭವಿಷ್ಯ ಹೇಳಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಎಲ್ಲಾ ಕಡೆ ತೊಂದರೆ ಆಗುತ್ತದೆ. ಐದು ಕಡೆಯೂ ತೊಂದರೆ ಇದೆ. ಇನ್ನೂ ಒಂದು ವಿಚಾರ, ಆಕಾಶದಿಂದ ಕೂಡ ದೊಡ್ಡ ಸುದ್ದಿ ಬರಬಹುದು ಎಂದು ಅವರು ಹೇಳಿದ್ದರು.
ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತದೆ ಎಂದಿದ್ದೆ. ಗುಡ್ಡ ಹೋಗುತ್ತದೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಅನೇಕ ಪ್ರದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳಾಗಲಿವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರಲಿದೆ ಎಂದು ಅವರು ಹೇಳಿದ್ದರು.
ಹಾಗಾಗಿ ಕೋಡಿಶ್ರೀ ಅವರ ಈ ಒಂದು ಹೇಳಿಕೆಗೆ ಹಾಗೂ ಮುಡಾ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯಗೆ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ಶ್ರೀಗಳ ಭವಿಷ್ಯವನ್ನು ತಾಳೆ ಹಾಕಲಾಗುತ್ತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಜಾ ಗೊಳಿಸಿತ್ತು. ಅದಾದ ಬಳಿಕ ನಿನ್ನೆ ಜನಪ್ರತಿನಿಧಿಗಳ ವಿಶೇಷ ತನಿಖೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಏನ್ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕು.