ಶಿವಮೊಗ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆ ಆ ನಡೆಯುತ್ತಿದ್ದು ಇದೀಗ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ ಗೆ ಲೋಕಸಭಾ ಟಿಕೆಟ್ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ನಾವು ಐದು ವರ್ಷಗಳಲ್ಲಿ ಮಾಡಿದ್ದನ್ನು ಮಾಡಲು ಕಾಂಗ್ರೆಸ್ 20 ವರ್ಷಗಳನ್ನು ತೆಗೆದುಕೊಳ್ಳುತ್ತಿತ್ತು: ಪ್ರಧಾನಿ ಮೋದಿ
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು.ನಿನ್ನೆ ಅವರ ಮನೆಗೆ ಪ್ರಹ್ಲಾದ ಜೋಶಿಯವರನ್ನು ಕಳುಹಿಸಿದ್ದೇ ಎಂದು ತಿಳಿಸಿದರು.
ಯಡಿಯೂರಪ್ಪನವರೇ ನಿಮಗೆ ‘ಶೋಭಾ’ ಮುಖ್ಯನಾ? ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ಆಕ್ರೋಶ
ನನ್ನ ಜೊತೆಗೆ ಈಶ್ವರಪ್ಪ ಅವರು ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ.ದೆಹಲಿಯಲ್ಲಿ ಈ ಕುರಿತಂತೆ ಅಮಿತ ಶಾ ಅವರ ಜೊತೆಗೆ ಚರ್ಚಿಸೋಣ. ಈಗಲೂ ಕಾಲ ಮಿಂಚಿಲ್ಲ ಅವರಿಗೆ ನಾನು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಈಶ್ವರಪ್ಪ ನನ್ನ ಜೊತೆಗೆ ಬರಲಿ ಎಂದು ಯಡಿಯೂರಪ್ಪ ತಿಳಿಸಿದರು.
ಈಗಲೂ ಅವರು ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ. ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಲೋಕಸಭಾ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ. ದಯವಿಟ್ಟು ನಿಮ್ಮ ಮೂಲಕ ಅವರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.