ದೆಹಲಿ: ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಸಿಎಂ ಅಶೋಕ್ ಗೆಹ್ಲೋಟ್ ʻಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲʼ ಎಂದು ಗುರುವಾರ ಘೋಷಿಸಿದ್ದು, ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಗೆಹ್ಲೋಟ್ ನಿನ್ನೆ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕ್ಷಮಾಪಣಪತ್ರ ನೀಡಿದರು. ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಗೆಹ್ಲೋಟ್ ʻಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ರಾಜಸ್ಥಾನ ಶಾಸಕರ ನಡೆಯಿಂದ ಸೋನಿಯಾ ಗಾಂಧಿಗೆ ಬೇಸರವಾಗಿದೆ. ಭಾನುವಾರ ನಡೆದ ಬೆಳವಣಿಗೆಗಳಿಗಾಗಿ ನಾನು ಸೋನಿಯಾ ಗಾಂಧಿ ಅವರ ಬಳಿ ಕ್ಷಮೆಯಾಚಿಸಿದ್ದೇನೆ. ನಾನು ಎಂದಿಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವೆʼ ಎಂದಿದ್ದಾರೆ.
ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ(ಇಂದು) ನಾಮಪತ್ರ ಸಲ್ಲಿಸುವ ಸಾಧ್ಯತೆಯಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಶಶಿ ತರೂರ್ ಅವರನ್ನು ಭೇಟಿ ಮಾಡಿದ್ದು, ಅವರು ತಮ್ಮದು “ಪ್ರತಿಸ್ಪರ್ಧಿಗಳ ನಡುವಿನ ಯುದ್ಧವಲ್ಲ. ಇದು ಸಹೋದ್ಯೋಗಿಗಳ ನಡುವಿನ ಸೌಹಾರ್ದ ಸ್ಪರ್ಧೆ” ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ನಾಮಪತ್ರ ಪ್ರಕ್ರಿಯೆಯ ಕೊನೆಯ ದಿನವಾದ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಾಗಿ ತರೂರ್ ಈಗಾಗಲೇ ಘೋಷಿಸಿದ್ದಾರೆ. ಅಧ್ಯಕ್ಷ ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.
BIG NEWS : ಹಿರಿಯ ನಾಗರಿಕರು, ವಿದ್ಯಾರ್ಥಿಗಳ ಪ್ರಯಾಣದರ ರಿಯಾಯಿತಿ 50%-25% ಕ್ಕೆ ಕಡಿತಗೊಳಿಸಿದ ʻಏರ್ ಇಂಡಿಯಾʼ!
BIGG BREAKING NEWS : ರಾಜ್ಯದ ಹಲವೆಡೆ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayuktha Raid