ಮಂಡ್ಯ : ತೀವ್ರ ಕುತೂಹಲ ಮೂಡಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ಘೋಷಿಸಿದ್ದಾರೆ.
ಮಂಡ್ಯ ನಗರದ ಶ್ರೀ ಕಾಳಿಕಾಂಬ ಸಮುದಾಯ ಭವನದಲ್ಲಿ ಬುಧವಾರ ತಮ್ಮ ಸಾವಿರಾರು ಬೆಂಬಲಿಗರ ಬಹಿರಂಗ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ.
ಪಕ್ಷೇತರ ಸಂಸದೆ, ಒಬ್ಬಂಟಿಯಾಗಿ ಕೋವಿಡ್ ಸಂಕಷ್ಟದ ಸಮಯದಲ್ಲೂ 5 ವರ್ಷಗಳನ್ನು ಪೂರೈಸಿ ಕೊಟ್ಯಾಂತರ ರೂಪಾಯಿ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ.
ಈಗಾಗಲೇ ಹಲವು ಬಾರಿ ಚರ್ಚಿಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಕ್ಷೇತ್ರಕ್ಕೆ 4 ಸಾವಿರ ಕೋಟಿ ಅನುದಾನ ನೀಡಿದ ಕೇಂದ್ರದ ಬಿಜೆಪಿ ಸರ್ಕಾರದ ನರೇಂದ್ರ ಮೋದಿ ಅವರು ದೆಹಲಿಗೆ ಕರೆಸಿಕೊಂಡು ಚರ್ಚಿಸಿ ಅಭಿವೃದ್ಧಿಯೇ ಮಂತ್ರ ಎಂದು ಯಾವುದೇ ಒಂದು ಆರೋಪವಿಲ್ಲದ ದೇಶದ ಸುಭದ್ರ ರಕ್ಷಣೆಗೆ
ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಪಟ್ಟಕ್ಕೆ ಕೂರಿಸಲು ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಬೆಂಬಲಕ್ಕೆ ನಿಲ್ಲುವುದರೊಂದಿಗೆ ಮೈತ್ರಿಧರ್ಮ ಪಾಲಿಸಲು ಮಾನಸಿಕವಾಗಿ ನಿರ್ಧರಿಸಿದ್ದೇನೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿದ್ದಾಜಿದ್ದಿಗೆ ನಿಂತಿದ್ದ ಜೆಡಿಎಸ್ ನಾಯಕರ ಜೊತೆಗೆ ಹಳೆಯ ಕಹಿ ನೆನಪುಗಳನ್ನು ಮರೆತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲ ಘೋಷಿಸಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
ಬರ ಪರಿಹಾರ ಸಂಬಂಧ ಅಮಿತ್ ಶಾ ಹೇಳಿಕೆ ಸತ್ಯ ಎಂದು ಸಾಬೀತುಪಡಿಸಿದರೆ ರಾಜಿನಾಮೆ ನೀಡುತ್ತೇನೆ : ಸಿಎಂ ಸಿದ್ದರಾಮಯ್ಯ