ಮೈಸೂರು : ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ಸಿಎಂ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಂದಿನ ವಿಧಾನಸಭೆ ಚುನಾವಣೆ ವೇಳೆ ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವರ್ಷವಾಗಲಿದೆ. 83 ವರ್ಷವಾದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗಲ್ಲ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತದೆ. ಹೀಗಾಗಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದರು.
ನಿರೀಕ್ಷಿಸಿದಂತೆಯೇ ರಾಜ್ಯದಲ್ಲಿ ನಿಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಸುಳ್ಳುಗಳ ಮೂಲಕವೇ ಉದ್ಘಾಟಿಸಿದ್ದೀರಿ, ಇದಕ್ಕಾಗಿ ಅಭಿನಂದನೆಗಳು.
ಅಮಿತ್ ಶಾ ಅವರೇ ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬವಾಗಿ ಬರಪರಿಹಾರ ಕೋರಿ ಮನವಿ ಸಲ್ಲಿಸಿತ್ತು. ಅಷ್ಟರಲ್ಲಿ ಚುನಾವಣೆ ಘೋಷಣೆಯಾಗಿರುವ ಕಾರಣ ಪರಿಹಾರ ನೀಡಲು ಸಾಧ್ಯವಾಗಿಲ್ಲ’ ಎಂಬ ಅಪ್ಪಟ ಸುಳ್ಳನ್ನು ರಾಮನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದೀರಿ. ಈ ಸುಳ್ಳನ್ನು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ಕುಟುಕಲಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಾನು ನಿಮ್ಮ ಮುಂದೆ ಇಡುವ ಸತ್ಯವನ್ನು ಸುಳ್ಳೆಂದು ನೀವು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಾನು ನಿವೃತ್ತಿಯಾಗುತ್ತೇನೆ. ನಿಮಗೆ ನಿಮ್ಮ ಮಾತನ್ನು ಸತ್ಯ ಎಂದು ಸಾಬೀತು ಮಾಡಲಾಗದಿದ್ದರೆ ನೀವೇನು ಮಾಡಬೇಕೆಂದು ನೀವೇ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.