ಹುಬ್ಬಳ್ಳಿ: “ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದರೆ ನಾನು ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಅಂತ ಕಾಂಗ್ರೆಸ್ ಎಂಎಲ್‌ಸಿ ಹಾಗು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಅವರು ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ. ನಾನು ಬಿಜೆಪಿ ತೊರೆದ ನಂತರ ಆಗಿರುವ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿದ್ದಾರೆ. ಆದರೆ ಪಕ್ಷದ ಮುಖಂಡರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ, ಈ ವಿಷಯದ ಬಗ್ಗೆ ಚರ್ಚೆ ಮಾಡಿಲ್ಲ. ಯಾರು ಏನೇ ಪ್ರಯತ್ನ ಮಾಡಿದರೂ ನಾನು ಬಿಜೆಪಿಗೆ ಹಿಂದಿರುಗಿ ಹೋಗಲ್ಲ ಅಂತ ಹೇಳಿದರು.