ಮಂಗಳೂರು : ಫೆಬ್ರವರಿ 9 ರಿಂದ ನಮ್ಮ ಮೆಟ್ರೋ ಪ್ರಯಾಣದರ ಶೇಕಡ 5ರಷ್ಟು ಹೆಚ್ಚಳ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೆಟ್ರೋ ದರ ಹೆಚ್ಚಳ ವಿಚಾರವಾಗಿ ನಮ್ಮನ್ನು ಯಾರು ಸಂಪರ್ಕಿಸಿಲ್ಲ ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದವರು ಇದ್ದಾರೆ ಎಂದು ತಿಳಿಸಿದರು.
ಮಂಗಳೂರಲ್ಲಿ ಮಾತನಾಡಿದ ಅವರು, ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ, ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗಲು ಬಿಡಲ್ಲ. ಪ್ರಯಾಣದರ ಪರಿಷ್ಕರಣೆ ವಿಚಾರವಾಗಿ ಮಾತನಾಡುತ್ತೇನೆ ಎಂದು ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.








