ನವದೆಹಲಿ : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಷ್ಟ್ರದ ಹೇಳಿಕೆಯನ್ನು ನೀಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಹೇಳಿಕೆಗೆ ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದು ದೇಶ ಒಡೆಯುವ ಕುರಿತು ಯಾರೇ ಮಾತನಾಡಿದರು ಸಹಿಸುವುದಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರು ಸಹಿಸುವುದಿಲ್ಲ ಯಾವುದೇ ಪಕ್ಷದವರಾಗಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರಿಗೆ ನಾವೆಲ್ಲರೂ ಒಂದೇ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸದ ಡಿಕೆ ಸುರೇಶ್ ಹೇಳಿಕೆಗೆ ಇದೀಗ ವಿರೋಧ ವ್ಯಕ್ತಪಡಿಸಿದ್ದಾರೆ