ಕೊಪ್ಪಳ : ಜನಪ್ರಿಯ ಸಿಎಂ ಸಿದ್ದರಾಮಯ್ಯ ಉಳಿಸಿಕೊಳ್ಳಬೇಕಾಗಿದೆ ಹೀಗಾಗಿ ನಾನು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.
ಈ ಕುರಿತು ಆಡಿಯೋ ಸಂದೇಶ ರಿಲೀಸ್ ಮಾಡಿರುವ ಇಕ್ಬಾಲ್ ಅನ್ಸಾರಿ, ಪಕ್ಷದ ಪರ ಕೆಲಸ ಮಾಡಲು ಒಪ್ಪಿದ್ದೇನೆ. ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ಬರುವಂತೆ ಹೇಳಿದ್ದಾರೆ. ಸಿಎಂ ಸ್ಥಾನದಲ್ಲಿ ಮುಂದುವರೆಯಬೇಕಾದ್ರೆ ಚುನಾವಣಾ ಪ್ರಚಾರ ಭಾಗಿಯಾಗಬೇಕು ಎಂದು ಹೇಳಿದ್ದಾರೆ. ಹೀಗಾಗಿ ನಾನು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.
ಜನಪ್ರಿಯ ಸಿಎಂ ಸಿದ್ದರಾಮಯ್ಯ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಸಿದ್ದರಾಮಯ್ಯ ಆದೇಶ ಪಾಲನೆಗೆ ಮುಂದಾಗಿದ್ದೇನೆ. ಆಡಿಯೋ ಸಂದೇಶದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.