ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ದರ ಏರಿಕೆಯ ಬಗ್ಗೆಯೇ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮತ ಚಲಾಯಿಸದೇ ಇದ್ದಕ್ಕೆ ಇಂಧನ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ ಹಾಗೇ, ಹೀಗೆ ಅಂತ ಚರ್ಚೆಯಾಗುತ್ತಿದೆ. ಹಾಗಾದ್ರೇ ನಿಜಕ್ಕೂ ಪೆಟ್ರೋಲ್, ಡೀಸೆಲ್ ದರ ಕರ್ನಾಟಕದಲ್ಲಿ ಹೆಚ್ಚೋ ಅಥವಾ ಇತರೆ ರಾಜ್ಯಗಳಲ್ಲೋ ಎನ್ನುವ ಡೀಟೆಲ್ಸ್ ಮುಂದೆ ಓದಿ.

ಸಿಎಂ ಸಿದ್ಧರಾಮಯ್ಯ ಅವರು, ಈ ವಿಚಾರವನ್ನು ಸಮರ್ಥಿಸಿಕೊಂಡು ಮಾತನಾಡಿ, ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ ಎಂಬುದಾಗಿ ಹೇಳಿದ್ದರು.

ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂಬುದಾಗಿ ಸಮರ್ಥಿಸಿಕೊಂಡಿದ್ದಾರೆ.

ಹಾಗಾದ್ರೇ ಯಾವ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಡೀಟೆಲ್ಸ್

ಆಂಧ್ರ ಪ್ರದೇಶ :-
ಪೆಟ್ರೋಲ್ 109.61 ₹
ಡೀಸೆಲ್ 97.42 ₹

ತೆಲಂಗಾಣ:-
ಪೆಟ್ರೋಲ್ 109.41 ₹
ಡೀಸೆಲ್ 97.51 ₹

ತಮಿಳುನಾಡು:-
ಪೆಟ್ರೋಲ್ 102.00 ₹
ಡೀಸೆಲ್ 97.60 ₹

ಕೇರಳ:-
ಪೆಟ್ರೋಲ್ 106.40 ₹
ಡೀಸೆಲ್ 94.34 ₹

ಕರ್ನಾಟಕ:-
ಪೆಟ್ರೋಲ್ 102.89 ₹
ಡೀಸೆಲ್ 89.56 ₹

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

BREAKING : ಭೀಮಾ ತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು : ಗುಂಡಿಕ್ಕಿ ರೌಡಿಶೀಟರ್‌ ಅಶೋಕ್‌ ಬರ್ಬರ ಹತ್ಯೆ

Share.
Exit mobile version