ಯಾದಗಿರಿ: ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಅಂತ BJP ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಅವರು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ ಮೀಸಲಾತಿ ತೆಗೆದು ಹಾಕುತ್ತೇವೆ. ಅದನ್ನು ಎಸ್‍ಸಿ, ಎಸ್‍ಟಿ ಹಾಗೂ ಹಿಂದುಳಿದ ಜನಾಂಗದವರಿಗೆ ಹಂಚಿಕೆ ಮಾಡುತ್ತೇವೆ ಅಂತ ಹೇಳಿದರು.
ಇನ್ನೂ ಇದೇ ವೇಳೆ ಅವರು ಮಾತನಾಡುತ್ತ, ಮೊದಲ ಹಂತದಲ್ಲಿ ಮತದಾನ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲೂ ಮತ್ತು ಉಳಿದ 14 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share.
Exit mobile version