ಹುಬ್ಬಳ್ಳಿ: ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿರೋದು ಸಾಬೀತು ಪಡಿಸಿದ್ರೇ, ನಾಳಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹ್ಮದ್ ಖಾನ್ ಸವಾಲ್ ಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ಸರ್ಕಾರದ ಅಧಿಕಾರದಲ್ಲಿದ್ದಾಗ ಈ ಹಿಂದೆ ಈ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಆ ಬಳಿಕ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮನೆಗಳ ಯಾವುದೇ ಅಭಿವೃದ್ಧಿ ಆಗಲಿಲ್ಲ ಎಂಬುದಾಗಿ ಕಿಡಿಕಾರಿದರು.
ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗಲೇ ಮಂಜೂರು ಮಾಡಿರೋ ಮನೆಗಳನ್ನು ನಿರ್ಮಾಣ ಮಾಡಲು 8 ವರ್ಷ ಬೇಕಾಯಿತು ಎಂಬುದಾಗಿ ಕಿಡಿಕಾರಿದರು.
ರಾಜ್ಯದಲ್ಲಿ ಮುಂದಿನ ತಿಂಗಳು 42,000 ಮನೆ ಹಂಚಿಕೆ ಮಾಡಲಾಗುತ್ತಿದೆ. ಹುಬ್ಬಳ್ಳಿ ಒಂದಕ್ಕೆ ಒಂದು ಸಾವಿರಕ್ಕೂ ಹೆಚ್ಚು ಮನೆ ನೀಡುತ್ತಿದ್ದೇವೆ. ಈ ಮನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ದೊಡ್ಡ ಕಾರ್ಯಕ್ರಮದಲ್ಲಿ ಹಂಚಿಕೆ ಮಾಡುವುದಾಗಿ ತಿಳಿಸಿದರು.
ನೀವು ಈ ಐದು ವಿಷಯಗಳನ್ನು ಪಾಲಿಸಿದರೆ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ