ಮೈಸೂರು : ರಾಜ್ಯದಲ್ಲಿ ಬರ ಘೋಷಣೆಯಾದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಇದು ಸುಳ್ಳು ಎನ್ನುವುದಾದರೆ ನಾನು ರಾಜೀನಾಮೆ ಕೊಡುತ್ತೇನೆ. ಅದು ಸತ್ಯವಾಗಿದ್ದರೆ ಅಮಿತ್ ಶಾ ರಾಜೀನಾಮೆ ನೀಡುತ್ತಾರೆಯೇ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದರು.
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಬೆಳಿಗ್ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
BREAKING : ಬೆಂಗಳೂರಿನ ಹೈಕೋರ್ಟ್ ನಲ್ಲಿ ನ್ಯಾಯ ಪೀಠದ ಮುಂದೆಯೇ ಕುತ್ತಿಗೆ ಕೊಯ್ದುಕೊಂಡ ವ್ಯಕ್ತಿ
ಮುಂಗಾರು ಹಂಗಾಮಿನಲ್ಲಿ ಬರಗಾಲ ಘೋಷಣೆ ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಅಕ್ಟೋಬರ್ 31 ರವರೆಗೆ ಕೇಂದ್ರ ಸರ್ಕಾರ ಸೂಚನೆ ಕೊಡುತ್ತೆ. ಸೆಪ್ಟೆಂಬರ್ 13ರಂದು ನಾವು ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದ್ದೇವೆ. ಮುಂಗಾರು ಹಂಗಾಮಿನ ಮಧ್ಯದಲ್ಲಿ ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರವೇ ಅವಕಾಶವನ್ನು ಕಲ್ಪಿಸಿದೆ ಎಂದರು.
ರಾಜಿನಾಮೆ ಕೊಟ್ಟು ಬನ್ನಿ, ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ನಿಲ್ಲೋಣ: ಸಿಎಂ ಸಿದ್ದರಾಮಯ್ಯಗೆ ಜಿಟಿಡಿ ಸವಾಲು
ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ, ರಾಜ್ಯಕ್ಕೆ ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.
ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು, ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.
ಕೇಂದ್ರ ಬಿಜೆಪಿ ಸರ್ಕಾರ, ಶ್ರೀಮಂತರ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ : ಸಚಿವ ಪ್ರಿಯಾಂಕ್ ಖರ್ಗೆ