ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ.ಸುಧಾಕರ್ ಅವರು ಒಂದು ಮತದ ಮುನ್ನಡೆ ಸಾಧಿಸಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಅವರು ಕಾಂಗ್ರೆಸ್ ನ ರಕ್ಷಾ ರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈಶ್ವರ್ ಅವರು ಸುಧಾಕರ್ ಅವರನ್ನು ಸೋಲಿಸಿದ್ದರು.
“ನಾನು ಈಗಾಗಲೇ ಒಂದು ಸವಾಲನ್ನು ಹಾಕಿದ್ದೇನೆ… ನಾವು 100% ಗೆಲ್ಲುತ್ತೇವೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತವಾದರೂ ಹೆಚ್ಚುವರಿ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದರು. ಸುಧಾಕರ್ ಟೀಕೆಗೆ ಪ್ರತಿಕ್ರಿಯಿಸಿದ ಈಶ್ವರ್, ನಕಲಿ ಪ್ರಮಾಣಪತ್ರಗಳೊಂದಿಗೆ ಎಂಬಿಬಿಎಸ್ ಪೂರ್ಣಗೊಳಿಸಿದವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.