ಬೆಂಗಳೂರು : ಬಿಜೆಪಿ ಎಂ ಎಲ್ ಸಿ H. ವಿಶ್ವನಾಥ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ಇದೀಗ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ವಿಶ್ವನಾಥ್ ಭೇಟಿ ಮಾಡಿದ್ದು. ಹಲವು ಕುತೂಹಲಕ್ಕೆ ಕಾರಣವಾಗಿದೆ. ಜೊತೆಗೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ರನ್ನು ಸಹ ಭೇಟಿ ಮಾಡಿದ್ದಾರೆ.
ಸಿದ್ದರಾಮಯ್ಯ-ಖರ್ಗೆ ಭೇಟಿ ವಿಚಾರ ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗೆ ಕಾರಣವಾಗಿದ್ದು, ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಎಚ್. ವಿಶ್ವನಾಥ್ ಅವರು ಬಿಜೆಪಿಗೆ ವಿದಾಯ ಹೇಳುವ ಲಕ್ಷಣಗಳು ಇದೀಗ ಗೋಚರಿಸುತ್ತಿದೆ. ಕೆಲವು ತಿಂಗಳಿನಿಂದ ಸ್ವಪಕ್ಷ ಬಿಜೆಪಿ ಮತ್ತು RSS ವಿರುದ್ಧ ಆರೋಪ ಮಾಡುತ್ತಾ ಕಾಂಗ್ರೆಸ್ ಪಕ್ಷದ ಪರ ಮತನಾಡಿದ್ದ ವಿಶ್ವನಾಥ್ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ