ಚಿಕ್ಕಮಗಳೂರು: ಮಹಾತ್ಮ ಗಾಂಧಿ (Mahatma Gandhi) ಕೊಂದವರು ನನ್ನನ್ನು ಬಿಡುತ್ತಾರಾ, ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಪ್ರಶ್ನೆ ಮಾಡಿದ್ದು ಈ ಮೂಲಕ ತಮ್ಮ ಜೀವಕ್ಕೆ ಇರುವ ಅಪಾಯದ ಬಗ್ಗೆ ಹೇಳಿಕೊಂಡಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಚಿಕ್ಕಮಗಳೂರಿನ ನೆರೆ ಪೀಡಿದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಉದ್ದೇಶಿಸಿ ಸಭೆಯಲ್ಲಿ ಮಾತನಾಡುತ್ತ ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಸಭೆಯಲ್ಲಿ ಮಹಾತ್ಮ ಗಾಂಧಿ ಕೊಂದವರು ನನ್ನನ್ನು ಬಿಡುತ್ತಾರಾ ಅಂತ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಇನ್ನೂ ಇದೇ ವೇಳೆ ಮಾಜಿ ಸಿಎಂ ಸಿದ್ದುಗೆ ಮತ್ತೆ ಪ್ರತಿಭಟನೆ ಬಿಸಿ ಎದುರಾಗಿದ್ದು, ಚಿಕ್ಕಮಗಳೂರಿನಲ್ಲಿ ಬಿಜೆಪಿಗರಿಂದ ಕಪ್ಪು ಬಟ್ಟೆ ಪ್ರದರ್ಶನ ಮಾಡಿರುವ ಘಟನೆ ನಡೆದಿದೆ.
ಇಂದು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಇದೇ ವೇಳೆಯಲ್ಲಿ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು, ಕೂಡಲೇ ಸ್ಥಳದಲ್ಲಿದ್ದ ಕಾಂಗ್ರೆಸ್ನವರು ಸಿದ್ದರಾಮಯ್ಯಗೆ ಜೈ ಘೋಷಣೆ ಮೊಳಗಿಸಿ ಟಾಂಗ್ ಕೋಡಲು ಮುಂದಾದರು ಸ್ಥಳದಲ್ಲಿದ್ದು, ಪೋಲಿಸ್ ನವರು ಎರಡು ಕಡೆಯವರನ್ನು ಚದುರಿಸಲು ಹರ ಸಾಹಸ ಪಡಬೇಕಾದ ಸನ್ನಿವೇಶ ನಿರ್ಮಾಣವಾಯಿತು.
ಈ ನಡುವೆ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ಟಿಟ್ಟರ್ನಲ್ಲಿ “ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು ಎಂದು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು, ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ ಎದುರಿಸುವುದು, ಸಮರ್ಥಿಸುವುದು ಹೇಡಿಗಳ ಲಕ್ಷಣ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನೂ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಇದೇ ಆಗಸ್ಟ್ 26 ರಂದು ಕೊಡಗಿನಲ್ಲಿ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಬರೋಬ್ಬರಿ ಒಂದು ಲ ಮಂದಿಯನ್ನು ಸೇರಿಸಲು ಸಿದ್ದತೆಯನ್ನು ನಡೆಸಲು ಮುಂದಾಗಿದೆ ಎನ್ನಲಾಗಿದೆ.
ಈ ಮೂಲಕ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿಗೆ ಟಕ್ಕರು ಕೊಡಲು ಮುಂದಾಗಿರುವುದು ಸುಳ್ಳಲ್ಲ. ಇನ್ನೂ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿರವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಕರ್ನಾಟಕ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಅಂತ ಹೇಳಿದ್ದಾರೆ.