ಮೈಸೂರು : ಲೋಕಸಭಾ ಚುನಾವಣೆಗೆ ಮೈಸೂರು ಕ್ಷೇತ್ರದ ಹಾಲಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ಕೈತಪ್ಪುತ್ತದೆ ಎಂಬ ವಿಚಾರವಾಗಿ ಇಂದು ಅವರು ಪ್ರತಿಕ್ರಿಯೆ ನೀಡಿ ನಾನು ಈ ಬಾರಿಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೆಸರಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಕೊಡಗು ಕ್ಷೇತ್ರದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತೆ ಎಂಬ ಹೇಳಿಕೆ ವಿಚಾರವಾಗಿ,ಪ್ರತಿಕ್ರಿಯೆ ನೀಡಿ ಅಂತಿಮವಾಗಿ ಬಿಎಸ್ ಯಡಿಯೂರಪ್ಪ ಹಾಗೂ ಪಕ್ಷದ ಹೈಕಮಾಂಡ್ ಈ ಕುರಿತಂತೆ ತೀರ್ಮಾನ ಮಾಡುತ್ತದೆ ಎಂದರು.
ನಾನು ಮೊದಲ ಬಾರಿ ಸ್ಪರ್ಧಿಸಿದಾಗ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಗೆದ್ದಿದ್ದೇನೆ. ಎರಡನೇ ಬಾರಿಯೂ ಪ್ರಧಾನಿ ಮೋದಿ ಹೆಸರಲ್ಲಿ ಗೆದ್ದಿದ್ದೇನೆ. ಮೂರನೇ ಬಾರಿ ಮೋದಿ ಹೆಸರಿನಲ್ಲಿ ಗೆಲ್ಲುತ್ತೇನೆ. ಪಕ್ಷದ ವಿಶ್ವಾಸ ನನ್ನ ಮೇಲಿದೆ ನನಗೆ ಮತ್ತೆ ಅವಕಾಶ ಸಿಗುತ್ತದೆ.ನನ್ನ ಬಗ್ಗೆ ಮೋದಿ ಅವರಿಗೆ ಗೊತ್ತಿದೆ ಅವರು ಆಶೀರ್ವಾದ ಮಾಡುತ್ತಾರೆ ಎಂದು ತಿಳಿಸಿದರು.
ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಇದೀಗ ಹೊಡೆದಾಟ ನಡೆಯುತ್ತಿದೆ.ಬಿಜೆಪಿಯಲ್ಲಿ ಗೆಲುವಿನ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಇರಲು ಎಲ್ಲರೂ ಪ್ರಯತ್ನ ಮಾಡುತ್ತಾ ಇರುತ್ತಾರೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ. ನನಗೆ ತಾಯಿ ಚಾಮುಂಡಿ ಪಿಎಂ ಮೋದಿ ಅವರ ಆಶೀರ್ವಾದವಿದೆ ಎಂದು ಮೈಸೂರು ನಗರದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.