ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ತಮ್ಮ ಪರ ಒಲವು ತೋರಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು, ಶಿಕ್ಷಕರ ಸೇವೆ ಮಾಡೋದು ಖಚಿತ ಅಂತ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರಿನಲ್ಲಿ ವಿಶೇಷ ಸಭೆಯನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಾ. ಕೆ. ಕೆ. ಮಂಜುನಾಥ್ ಕುಮಾರ್ ಅವರು ನಡೆಸಿದರು. ಇದರಲ್ಲಿ ಚಿಕ್ಕಮಗಳೂರಿನ ಎಲ್ಲಾ ಮುಖಂಡರು ಭಾಗವಹಿಸಿದ್ದರು.
ಈ ವೇಳೆ ಚಿಕ್ಕಮಗಳೂರು ಶಾಸಕ HD ತಮ್ಮಯ್ಯನವರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವಿನ ಸನಿಹದಲ್ಲಿ ಇದ್ದಾರೆ. ಎಲ್ಲಾ ಶಿಕ್ಷಕರನ್ನು ಮನಸ್ಸು ಮಾಡಿದರೆ ಅಸಾಧ್ಯವಾದುದನ್ನು ಸಾಧಿಸಬಹುದು ಎಂದರು.
ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ. ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಶಿಕ್ಷಕರ ಮೇಲೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದ್ದು, ಗೆಲುವಿನ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ. ನೈರುತ್ಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು, ಶಿಕ್ಷಕರ ಸೇವೆ ಮಾಡೋದು ಖಚಿತ ಅಂತ ವಿಶ್ವಾಸ ವ್ಯಕ್ತ ಪಡಿಸಿದರು.
ಇದಕ್ಕೆ ಧ್ವನಿಗೂಡಿಸಿದಂತ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಶಿಕ್ಷಕರು ಪದವೀಧರರು ಬುದ್ಧಿಜೀವಿಗಳಾಗಿರುತ್ತಾರೆ. ಯೋಚಿಸಿ ಮತ ಚಲಾಯಿಸಿದ್ರೇ, ನಾವುಗಳು ಗೆಲ್ಲುವುದು ನಿಶ್ಚಿತ ಎಂದರು.
ಇದೇ ಸಂದರ್ಭದಲ್ಲಿ ನೈರುತ್ಯ ಶಿಕ್ಷಕರು, ಪದವೀಧರ ಕ್ಷೇತ್ರದ ಅಭ್ಯರ್ಥಿಗಳಿಗೆ ಚಿಕ್ಕಮಗಳೂರು ನಗರಸಭಾ ಮಾಜಿ ಅಧ್ಯಕ್ಷ ಶಾಂತಕುಮಾರ್ ಬೆಂಬಲವನ್ನು ಘೋಷಿಸಿದರು.
ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಚೇಗೌಡ, ಕಾಂಗ್ರೆಸ್ ವಕ್ತಾರರಾದ ರವೀಶ್ ಬಸಪ್ಪ ಖ್ಯಾತಿನ ಬೇಡು ಇದ್ದರು. ಇವರ ಜೊತೆಗೆ ಸರ್ಕಾರಿ ಅನುದಾನಿತ ಅನುದಾನ ರಹಿತ ವಿವಿಧ ಸಂಘದ ಪದಾಧಿಕಾರಿಗಳು ಹಾಜರಿದ್ದರು.
BREAKING : ಮಹಿಳೆ ಕಿಡ್ನಾಪ್ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ
ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? HD ಕುಮಾರಸ್ವಾಮಿ ಕಿಡಿ