ಬೆಂಗಳೂರು : ನೂರಾರು ವರ್ಷಗಳ ಹಿಂದೆಯೇ ದೂರದೃಷ್ಟಿ ಯಿಂದ ಬೆಂಗಳೂರು ಅಭಿವೃದ್ಧಿ ಗೆ ನೀಲ ನಕ್ಷೆ ರೂಪಿಸಿ ಅನುಷ್ಠಾನ ಗೊಳಿಸಿದ ಕೀರ್ತಿ ನಾಡ ಪ್ರಭು ಕೆಂಪೇಗೌಡರದು ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಚಾಮರಾಜಪೇಟೆಯ ಅಜಾದ್ ನಗರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನತ್ತ ಇಡೀ ಜಗತ್ತು ನೋಡುತ್ತಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ತಿಳಿಸಿದರು.

ನಾಡಪ್ರಭು ಕೆಂಪೇಗೌಡರು ಒಂದು ಜಾತಿಗೆ ಸೀಮಿತ ಅಲ್ಲ.ಎಲ್ಲ ಸಮುದಾಯಕ್ಕೆ ಸೇರಿದವರು ಎಂದು ಹೇಳಿದರು.

ಕನಕ ಜಯಂತಿ, ವಾಲ್ಮೀಕಿ ಜಯಂತಿ, ಬಸವ ಜಯಂತಿಗೆ ಸರ್ಕಾರಿ ರಜೆ ನೀಡಿದಂತೆ ಕೆಂಪೇಗೌಡರ ಜಯಂತಿಗೂ ಸರ್ಕಾರಿ ರಜೆ ಘೋಷಿಸಬೇಕು. ಈ ಕುರಿತು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ಕೆ ಎಂ ಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಡಿಸಿ ರಮೇಶ್, ಬಿಟಿ ಶ್ರೀನಿವಾಸ ಮೂರ್ತಿ, ಅಪ್ಪೋಡ ಚಂದ್ರಶೇಖರ್, ಸೋಮಶೇಖರ್, ಗೋಪಾಲಣ್ಣ, ನಾರಾಯಣ, ಗೌಸಿ, ವಿನಾಯಕ್, ಸರ್ವರ್ ಬೇಗ್, ರವಿ, ಮಾದವ್ ಉಪಸ್ಥಿತರಿದ್ದರು.

ತುರ್ತು ಪರಿಸ್ಥಿತಿ ಪ್ರಸ್ತಾಪ ತಪ್ಪಿಸಬಹುದಿತ್ತು: ಲೋಕಸಭಾ ಸ್ಪೀಕರ್ ಭೇಟಿ ಮಾಡಿದ ರಾಹುಲ್ ಗಾಂಧಿ

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

Share.
Exit mobile version