ಬೆಂಗಳೂರು: ಚಳಿಗಾಲದ ಅಧಿವೇಶನ ( Karnataka Winter Session ) ಬೆಂಗಳೂರಿನಲ್ಲಿ ನಡೆಯಲಿದೆಯೋ ಅಥವಾ ಬೆಳಗಾವಿಯಲ್ಲಿ ನಡೆಯಲಿದೆಯೋ ಎಂಬುದು ತೀವ್ರ ಕುತೂಹಲ ಕೆರಳಿಸಿತ್ತು. ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಳಿಗಾಲದ ವಿಧಾನಮಂಡಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸೋದಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ.
ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
ಇಂದು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ 19 ರಿಂದ 30ರವರೆಗೆ 10 ದಿನಗಳ ಕಾಲ ಚಳಿಗಾಲದ ವಿಧಾನಮಂಡಲದ ಅಧಿವೇಶನ ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸೋದಕ್ಕೆ ನಿಗದಿ ಮಾಡಲಾಗಿದೆ.