ಮಂಡ್ಯ: ಬಿಜೆಪಿಯಲ್ಲಿ ನೂರು ಬಾಗಿಲು, ನಮ್ಮಲ್ಲಿ ಒಂದೇ ಬಾಗಿಲು. ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ.
ಅಧಿಕಾರದ ದರ್ಪದಲ್ಲಿ ಬಿಜೆಪಿಯವ್ರು ಮಾತಾಡುತ್ತಿದ್ದಾರೆ ಅಷ್ಟೇ ಎಂದು ಮಾಜಿ ಸಂಸದ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
BIGG NEWS: ಅಮೆರಿಕದಲ್ಲಿ ಅಪಹರಣಕ್ಕೊಳಗಾದ ಭಾರತೀಯ ಮೂಲದ ಕುಟುಂಬದ ನಾಲ್ವರು ಶವವಾಗಿ ಪತ್ತೆ| family kidnap
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಉತ್ಸಾಹದಿಂದ ಸಾಗುತ್ತಿದೆ. ಸೋನಿಯಾ ಗಾಂಧಿ ಯವರು ಭಾಗವಹಿಸ್ತಿರೋದು ನಮಗೆಲ್ಲ ಹೆಮ್ಮೆ. ಅಧಿಕಾರಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವ ಗಟ್ಟಿ ಮಾಡಲು ರಾಹುಲ್ ಗಾಂಧಿ ಈ ಯಾತ್ರೆ ಮಾಡುತ್ತಿದ್ದಾರೆ ಎಂದರು.
ಪಾದಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ ಸಿಕ್ತಿದೆ. ಈ ಭಾಗ ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರ ಕೋಟೆಯಾಗಿತ್ತು. ನಂತರ ಜೆಡಿಎಸ್ ಕೋಟೆಯಾಗಿತ್ತು. ಮುಂದೆ ಜನ ಯಾರ ಕಡೆ ತೀರ್ಪು ಕೊಡ್ತಾರೆ ಅಂತ ನೋಡಿ ಎಂದು ಹೇಳಿದರು.