ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಭವಾನಿ ರೇವಣ್ಣರನ್ನು ಈವರೆಗೂ ಆರೋಪಿಯನ್ನಾಗಿ ಮಾಡಿಲ್ಲ. FIR ನಲ್ಲಿ ಸೇರಿಸದೆ ಬಂಧಿಸಬಾರದು ಎಂದೇನಿಲ್ಲ.ಆದರೆ ಮಧ್ಯಂತರ ಜಾಮೀನು ಪರಿಗಣಿಸಲು ಏನಾದರೂ ದಾಖಲೆ ಬೇಕು. ಎಸ್ಐಟಿ ಮೊದಲು ಆಕ್ಷೇಪಣೆಯನ್ನು ಸಲ್ಲಿಸಲಿ ಎಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅಭಿಪ್ರಾಯ ತಿಳಿಸಿ ವಿಚಾರಣೆಯನ್ನುಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿತು.
ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಗುರುವಾರ ಅಥವಾ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲು ಭವಾನಿ ರೇವಣ್ಣ ಪರ ವಕೀಲರು ಮನವಿ ಮಾಡಿದರು.
ಈವರೆಗೆ ಭವಾನಿ ರೇವಣ್ಣಗೆ ಎಸ್ಐಟಿ ನೋಟಿಸ್ ಹಜಾರಿಗೊಳಿಸಿಲ್ಲ. ಹೀಗಾಗಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಎಸ್ಐಟಿ ಪರ ಎಸ್‍ಪಿಪಿ ಬಿಎನ್ ಜಗದೀಶ್ ಮನವಿ ಮಾಡಿದ್ದಾರೆ. ಈ ವೇಳೆ ಮುಂದಿನ ವಿಚಾರಣೆಯವರೆಗೂ ಬಂಧನದಿಂದ ರಕ್ಷಣೆ ನೀಡಲು ಹಾಗೂ ಮಧ್ಯಂತರ ಜಾಮಿನು ನೀಡಲು ಭವಾನಿ ರೇವಣ್ಣ ಪರ ವಕೀಲರು ಮನವಿ ಮಾಡಿದ್ದಾರೆ.
ಈಗಾಗಲೇ ಒಂದು ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಜೆಡಿ ರೇವಣ್ಣ ಅವರು ಜಾಮೀನು ಪಡೆದಿದ್ದಾರೆ. ಈ ಒಂದು ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಐಟಿ ಅವರಿಗೆ ವಿತರಣೆ ಹಾಜರಾಗಲು ನೋಟಿಸ್ ನೀಡಿದ್ದು ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದರು.