ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದಂತ ಶಾಸಕ ಹೆಚ್.ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇಂದು ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರ ಮುಂದೆ, ರೇವಣ್ಣ ಪರ ಹಾಗೂ ಸರ್ಕಾರಿ ವಕೀಲರ ನಡುವೆ ವಾದ – ಪ್ರತಿವಾದಗಳು ನಡೆಯಿತು. ಇಂತಹ ಕಾರಣಗಳಿಗೆ ಜಾಮೀನು ಕೊಡಲೇ ಬೇಕು ಎಂದು ರೇವಣ್ಣ ಪರ ವಕೀಲರಾದ ನಾಗೇಶ್ ವಾದ ಮಂಡಿಸಿದರು.
ಜಾಮೀನನ್ನು ಏಕೆ ಕೊಡಬಾರದು? ಕೊಟ್ಟರೆ ಮುಂದೇನಾಗುತ್ತದೆ ಎಂದು ಎಸ್‌ಐಟಿ ಪರ ವಕೀಲರಾದ (ಎಸ್‌ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್ ನಾಯ್ಕ್ ವಾದಿಸಿದ್ದರು. ಅಂತಿಮವಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಾದ – ಪ್ರತಿವಾದ ಆಲಿಸಿ ಹೆಚ್.ಡಿ ರೇವಣ್ಣ ಅವರಿಗೆ ಜಾಮೀನು ನೀಡಿ ಆದೇಶಿಸಿದೆ. ಈ ಮೂಲಕ ಅವರ ಆರು ದಿನಗಳ ಜೈಲುವಾಸ ಅಂತ್ಯವಾದಂತೆ ಆಗಿದೆ.
ಹೆಚ್.ಡಿ ರೇವಣ್ಣಗೆ ಷರತ್ತು ಬದ್ಧ ಜಾಮೀನು
ಇನ್ನೂ ಕೋರ್ಟ್ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣಗೆ ಷರತ್ತು ಬದ್ಧ ಚಾಮೀನು ಮಂಜೂರು ಮಾಡಿದೆ. ಇಬ್ಬರ ಶ್ಯೂರಿಟಿಯೊಂದಿಗೆ 5 ಲಕ್ಷ ಬಾಂಡ್ ನೀಡಬೇಕು. ಸಾಕ್ಷ್ಯ ನಾಶ ಮಾಡಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು. ಕೆ ಆರ್ ನಗರ ತಾಲೂಕು ಪ್ರವೇಶಿಸುವಂತಿಲ್ಲ ಎಂಬುದಾಗಿ ಷರತ್ತುಗಳನ್ನು ವಿಧಿಸಿದೆ. ಈ ಬಳಿಕ ಷರತ್ತು ಬದ್ಧ ಜಾಮೀನನ್ನು ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನೀಡಿದೆ. ಆದ್ರೇ ಇಂದು ಬಿಡುಗಡೆ ಆಗೋದು ಡೌಟ್ ಎನ್ನಲಾಗುತ್ತಿದೆ.
BREAKING: ಕೆ.ಆರ್ ನಗರ ‘ಸಂತ್ರಸ್ತೆ ಕಿಡ್ನ್ಯಾಪ್’ ಕೇಸ್: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಂಗಳೂರಲ್ಲಿ ಉಪ ವಿಭಾಗಗಳ ಹಂತದಲ್ಲಿ ‘ವಿಪತ್ತು ನಿರ್ವಹಣಾ ತಂಡಗಳ’ ನಿಯೋಜನೆ: ತುಷಾರ್ ಗಿರಿ ನಾಥ್