ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಬಂಧನವಾಗಿದ್ದು ಇಂದು ಅವರನ್ನು SIT ಅಧಿಕಾರಿಗಳು ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಈ ವೇಳೆ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡರೆ ಹಿನ್ನಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿತ್ತು. ಈ ವೇಳೆ ರೇವಣ್ಣ ಅವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ನಾನು ಯಾರನ್ನು ಕಿಡ್ನ್ಯಾಪ್ ಮಾಡಿಲ್ಲ. ಕಿಡ್ನ್ಯಾಪಿಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಒಂದೇ ಉತ್ತರ ನೀಡುತ್ತಿದ್ದರು. ಆದರೂ ಎಸ ಐ ಟಿ ಅಧಿಕಾರಿಗಳು ಬಿಡದೆ ಅವರಿಂದ ಹೇಳಿಕೆಗಳನ್ನು ಪಡೆಯಲು ನಿರಂತರವಾಗಿ ವಿಚಾರಣೆ ನಡೆಸಿದರು.

ಇದರಿಂದ ಮಾನಸಿಕ ಹಾಗು ದೈಹಿಕವಾಗಿ ಎಚ್ ಡಿ ರೇವಣ್ಣ ಅವರು ಕುಗ್ಗಿದ್ದರು. ಆದ್ದರಿಂದ ಅವರ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿತ್ತು. ಹಾಗಾಗಿ ಇಂದು SIT ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಬಂದಿದ್ದಾರೆ. ತಪಾಸಣೆ ಅಂತ್ಯವಾದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ ಎಂದು ಬೌರಿಂಗ್ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ

Share.
Exit mobile version