ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಅಪ ಹರಣಪ್ರಕರಣದಲ್ಲಿ ಜಾಮೀನು ಪಡೆದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತಿದೆ.
ಹೌದು ನಿನ್ನೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದ ರೇವಣ್ಣ, ಅಪಹರಣ ಪ್ರಕರಣಕ್ಕೆ ಸಾಕ್ಷ್ಯ ಕೊರತೆ ಆಧಾರದ ಮೇಲೆ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಆಧಾರದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್ ರದ್ದು ಮಾಡುವಂತೆ ಅರ್ಜಿ ಸಲ್ಲಿಸುವ ಕುರಿತು ಗಂಭೀರವಾಗಿ ಚಿಂತನೆ ನಡೆಸಲಾಗಿದೆ.
ಉದ್ದೇಶಪೂರ್ವಕವಾಗಿ ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದರು. ಇದೇ ಅಂಶಗಳನ್ನಿಟ್ಟುಕೊಂಡು ಪ್ರಕರಣ ರದ್ದು ಮಾಡುವಂತೆ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ ಎಂದು ತಿಳಿದುಬಂದಿದೆ.
ಮುಂದಿನ ದಿನದಲ್ಲಿ ಪ್ರಕರಣ ತಲೆಬಿಸಿಯನ್ನುಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಫ್‌ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದರೆ ಪ್ರಕರಣ ಸಂಪೂರ್ಣವಾಗಿ ರದ್ದಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಎಫ್ ಐಆರ್ ರದ್ದು ಕೋರಿ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ಹೇಳ ಲಾಗಿದೆ. ಈ ಸಂಬಂಧ ರೇವಣ್ಣ ಅವರು ತಮ್ಮ ಪರ ವಕೀಲರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.