ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿರುದ್ಧ ಈಗಾಗಲೇ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಎಚ್ ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ HD ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಸದ್ಯ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿದ್ದು ರೇವಣ್ಣ ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.
ಎಚ್ ಡಿ ರೇವಣ್ಣ ಕೊರಳಿಗೆ ಇದೀಗ ಅಪಹರಣ ಕೆಸ್ ಬಿಗಿಯಾಗಿದ್ದು, ಎಚ್ ಡಿ ರೇವಣ್ಣ ವಿರುದ್ಧ ಅಪಹರಣ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಭವಿಷ್ಯ ಕುರಿತು ನಿರ್ಧಾರವಾಗಲಿದೆ.ಬೆಳಿಗ್ಗೆ 11:00 ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದ್ದು ಕೆ ಆರ್ ನಗರದಲ್ಲಿ ಅಪರಣ ಪ್ರಕರಣ ದಾಖಲಾಗಿದೆ.
ಈ ಮಧ್ಯೆ, ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಅರ್ಜಿ ಸಲ್ಲಿಸಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣಗೆ ಇಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಈ ಸಂಬಂಧ ಜನಪ್ರತಿನಿದಿಗಳ ವಿಶೇಷ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯುವುದಕ್ಕೆ ಸಂಬಂಧಿಸಿದಂಥ ಗಂಭೀರ ಆರೋಪ ಯಾವುದೂ ಇಲ್ಲದ ಕಾರಣ ಅರ್ಜಿ ವಾಪಸ್ ಪಡೆದಿದ್ದರು.