ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳು ಶಾಸಕ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಸತತವಾಗಿ 5 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದ್ದು ಇದೀಗ ಅದು ಮುಕ್ತಾಯವಾಗಿದೆ.
ಹೌದು ಬೆಂಗಳೂರಿನ ಬಸವನಗುಡಿ ನಿವಾಸದಲ್ಲಿ ಸ್ಥಳ ಮಹಜರು ಇದೀಗ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಶಾಸಕ ನಿವಾಸಕ್ಕೆ ಇಂದು ಬೆಳಿಗ್ಗೆ ಎಸ್ಐಟಿ ಅಧಿಕಾರಿಗಳು ಭೇಟಿ ನೀಡಿದ್ದರು.
ಈ ವೇಳೆ ಸಂತ್ರಸ್ತ ಮಹಿಳೆಯರು ಕೂಡ ಸ್ಥಳ ಮಹಾರಾಜರು ಸಂದರ್ಭದಲ್ಲಿ ಮಹಾಜರು ಪ್ರಕ್ರಿಯೆ ನಡೆಸಿದ್ದಾರೆ ಈ ವೇಳೆ ಅಧಿಕಾರಿಗಳು ಸಂಪೂರ್ಣವಾಗಿ ಪ್ರಕ್ರಿಯೆಯ ವಿಡಿಯೋವನ್ನು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಸತತವಾಗಿ 5 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿತು ಎಂದು ತಿಳಿದುಬಂದಿದೆ.