ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ.
ಇದೆ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ HD ರೇವಣ್ಣ ಪತ್ನಿ ಭವಾನಿಯವರಿಗೂ ಸಂಕಷ್ಟ ಎದುರಾಗಿದೆ. ಕಿಡ್ನಾಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮೊದಲನೇ ನೋಟೀಸ್ ನೀಡಿದ್ದು, ಇದಕ್ಕೆ ಉತ್ತರ ನೀಡದ ಹಿನ್ನೆಲೆಯಲ್ಲಿ ಎರಡನೇ ನೋಟೀಸ್ ಜಾರಿ ಮಾಡಿದೆ.
ಕಳೆದ ಮೂರು ದಿನಗಳಿಂದ ಬೆಂಗಳೂರಿನ ಬಸವನಗುಡಿ ನಿವಾಸದಲ್ಲಿ ಭವಾನಿ ರೇವಣ್ಣ ಬೀಡು ಬಿಟ್ಟಿದ್ದಾರೆಕೆ.ಆರ್.ನಗರ ಮೂಲದ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದರೆ, ಪುತ್ರ ಪ್ರಜ್ವಲ್ ವಿದೇಶದಲ್ಲಿದ್ದಾನೆ.
ಈಗ ಭವಾನಿ ರೇವಣ್ಣ ತೀವ್ರ ನೋವಿನಲ್ಲಿದ್ದಾರೆ. ಇದರ ನಡುವೆ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ಭವಾನಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ನೋಟಿಸ್ ನೀಡಿದ್ದು ಭವಾನಿ ರೇವಣ್ಣ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.