ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ.
ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು. ಹೀಗಿದ್ದರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎನ್ನಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಹೊಳೆನರಸೀಪುರದ ಚಾಲಕ ಅಜಿತ್ ಅವರಿಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಜೊತೆಗೆ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಎಸ್ಐಟಿ ಪೊಲೀಸರು ತಿಳಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಲುಷಿತ ನೀರು ಸೇವಿ ಓರ್ವ ಸಾವು ಕೇಸ್: ನಾಳೆ ಸಿಎಂ ಸಿದ್ಧರಾಮಯ್ಯ ಮೈಸೂರಿನ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿ
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು