ಬೆಂಗಳೂರು: ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ, ಎಸ್ಐಟಿಯಿಂದ ಆಕ್ಷೇಪಣೆ ಸಲ್ಲಿಸಲಾಗಿದೆ. ಈ ಮೂಲಕ ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.

ಕೋರ್ಟ್ ಮುಂದೆ ಎಸ್ಐಟಿಯ ಎಸ್ ಪಿಪಿ ಜಾಯ್ನಾ ಕೋಥಾರಿ ಅವರು ವಾದ ಮಂಡಿಸಿ, ಜಾಮೀನು ಅರ್ಜಿಗೆ ನಾವು ಆಕ್ಷೇಪಣೆ ಸಲ್ಲಿಸುತ್ತಿರುವುದರ ಹಿಂದೆ ವಿಳಂಪದ ಉದ್ದೇಶವಿಲ್ಲ. ನಮ್ಮ ವಾದ ಮಂಡನೆಗೆ ಕಾಲಾವಕಾಶ ನೀಡಬೇಕು ಎಂಬುದಾಗಿ ಕೋರಿದರು.

ಈ ವೇಳೆ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆಗೆ ಕಾಲಾವಕಾಶ ನೀಡುವುದಿಲ್ಲ. ಬೇರೆ ಪ್ರಕರಣಗಳಲ್ಲಿ ನಾವು ಕಾಲಾವಕಾಶ ನೀಡಿಲ್ಲ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ ಎಂಬುದಾಗಿ ಸ್ಪಷ್ಟ ಪಡಿಸಿತು. ಸದ್ಯ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಾಸಕ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ.

‘SSLC ಪರೀಕ್ಷೆಯಲ್ಲಿ ಫೇಲ್’ ಆದ ವಿದ್ಯಾರ್ಥಿಗಳೇ ಗಮನಿಸಿ: ‘ಮರು ಪರೀಕ್ಷೆ’ ದಿನಾಂಕ ಪ್ರಕಟ | SSLC Main Exam-2 Timetable

ಚುನಾವಣಾ ಚರ್ಚೆಯಲ್ಲಿ ಚರ್ಮದ ಬಣ್ಣವನ್ನು ತರುವ ಮೂಲಕ ಪ್ರಧಾನಿ ‘ಜನಾಂಗೀಯವಾದಿ’ ಆಗಿದ್ದಾರೆ : ಚಿದಂಬರಂ

Share.
Exit mobile version