ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿದಂತ ಆರೋಪದಡಿ ಬಂಧಿಸಲಾಗಿದೆ. 1 ಕೋಟಿ ಹಣ ನೀಡುವಂತೆ ಸ್ವಾಮೀಜಿಗೆ ಬಂಧಿತ ಆರೋಪಿ ಸ್ಪೂರ್ತಿ ಬ್ಲ್ಯಾಕ್ ಮೇಲ್ ಮಾಡಿದ್ದರಂತೆ.
ಸ್ವಾಮೀಜಿಗೆ ಮಹಿಳೆ ಬ್ಲ್ಯಾಕ್ ಮೇಲ್ ಮಾಡಿದ್ದರಿಂದ 4.5 ಲಕ್ಷ ಹಣವನ್ನು ನೀಡಲಾಗಿತ್ತು. ಮತ್ತೆ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬಾಕೆಯನ್ನು ಬಂಧಿಸಲಾಗಿದೆ.
BREAKING: ಬೆಂಗಳೂರಲ್ಲಿ ಕಸ್ಟಮ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 7.72 ಕೆಜಿ ಕೊಕೇನ್ ವಶಕ್ಕೆ








