ಬಾಗಲಕೋಟೆ: ಮನೆಯಲ್ಲಿ ಸ್ನಾನ ಮಾಡಲು ತೆರಳಿದಂತ ಮಹಿಳೆಯ ತಲೆಯ ಮೇಲೆ ಅಪರಿಚಿತರು ಹಲ್ಲೆ ಮಾಡಿದ್ದಾರೆ. ಈ ಕಾರಣ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತ ಶಾಕಿಂಗ್ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೋಭಾ(40) ಎಂಬುವರು ತಮ್ಮ ಮನೆಯಲ್ಲಿ ಸ್ನಾನ ಮಾಡುತ್ತಿದ್ದಂತ ಸಂದರ್ಭದಲ್ಲಿ ಅಪರಿಚಿತರು ತಲೆಗೆ ಬಲವಾಗಿ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಈ ಪರಿಣಾಮ ಶೋಭಾ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಶೋಭಾ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ. ಈ ಸಂಬಂಧ ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೇಸ್ ದಾಖಲಿಸಿ ತನಿಖಎ ನಡೆಸುತ್ತಿದ್ದಾರೆ.
ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು: ಯುವಕನಿಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ
UPDATE : ತೀವ್ರ ಭೂಕಂಪಕ್ಕೆ ‘ಟಿಬೆಟ್’ ತತ್ತರ ; ಮೃತರ ಸಂಖ್ಯೆ 95ಕ್ಕೆ ಏರಿಕೆ |Earthquake