ಬೆಂಗಳೂರು: ಗೃಹಲಕ್ಮೀ ಯೋಜನೆ ಹಣದಿಂದ ಮಹಿಳೆಯರಿಗೆ ಅನೇಕ ಅನುಕೂಲವಾಗಿದೆ. ಗೃಹಲಕ್ಷ್ಮೀ ಹಣದಿಂದಲೇ ಮಹಿಳೆಯೊಬ್ಬರು ಪ್ರಿಡ್ಜ್ ಖರೀದಿಸಿದ್ದರು. ಆ ಬಳಿಕ ಟಿವಿ ಕೂಡ ಖರೀದಿಸಿ ಮಹಿಳೆ ಸಂತಸ ಹೊರ ಹಾಕಿದ್ದರು. ಈಗ ಮಹಿಳೆಯೊಬ್ಬರು ಹೊಸ ಮೊಬೈಲ್ ಕೂಡ ಖರೀದಿಸಿದ್ದಾರೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ.
ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ.
ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಗೃಹಲಕ್ಷ್ಮಿ… pic.twitter.com/XMYnvf2yBI
— Siddaramaiah (@siddaramaiah) April 28, 2024