ಬೆಂಗಳೂರು: ಪತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಟಿವಿ ಡಿಶ್ ಕೇಬಲ್ ಸಿಲುಕಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ಗ್ರಾಮದ ಲಕ್ಷ್ಮೀಬಾಯಿ ಜಾಧವ್ (36) ಎಂದು ಗುರುತಿಸಲಾಗಿದೆ. ಲಕ್ಷ್ಮೀಬಾಯಿ ಜಾಧವ್ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಬಲ್ ಮೂಲಕ ವಿದ್ಯುತ್ ಹರಿಯದ ಕಾರಣ ಅವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಬೆಸ್ಕಾಂನ ನಿರ್ಲಕ್ಷ್ಯವನ್ನು ಕೆಲವು ಮಾಧ್ಯಮ ವರದಿಗಳು ಸೂಚಿಸಿದ ನಂತರ ಈ ಸ್ಪಷ್ಟೀಕರಣ ಬಂದಿದೆ.