ಕೊಚ್ಚಿ: ಶನಿವಾರ ದುಬೈನಿಂದ ಬಂದಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ನಂತ್ರ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ, ಆಕೆ ಇದೀಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಿನಿ (56) ಅವರು ದುಬೈನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದರು. ಹಾರಾಟದ ಸಮಯದಲ್ಲಿ ಪ್ರಜ್ಞಾಹೀನರಾಗಿದ್ದರು. ವಿಮಾನ ಲ್ಯಾಂಡ್ ಆದ ನಂತರ ಆಕೆಯನ್ನು ಕೊಚ್ಚಿಯ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಇದೀಗ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಆಕೆ ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಈ ಬಗ್ಗೆ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.
Bharat Jodo yatra: ತಮಿಳುನಾಡ ಕುವರಿಯನ್ನೇ ವರಿಸ್ತಾರಂತೆ ರಾಹುಲ್ ಗಾಂಧಿ!
ಕ್ಲಿನಿಕ್ ಬಾಗಿಲು ತೆರೆಯಲು ವಿಳಂಬವಾಗಿದ್ಕೆ ವೈದ್ಯನನ್ನು ಹಿಗ್ಗಾಮುಗ್ಗಾ ಥಳಿಸಿದ ಜನರ ಗುಂಪು… Video
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ