ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಂತ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ರಸ್ತೆ ದಾಟುತ್ತಿದ್ದಂತ ಮಹಿಳೆಯೊಬ್ಬರ ಮೇಲೆಯೇ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯನ್ನು ಲಿಂಗಮ್ಮ ಎಂಬುದಾಗಿ ಗುರುತಿಸಲಾಗಿದೆ.
ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವಂತ ಲಿಂಗಮ್ಮ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್
BREAKING: ‘ಇಸ್ರೇಲ್’ನಲ್ಲಿ ಪಾದಚಾರಿಗಳಿಗೆ ವಾಹನ ಡಿಕ್ಕಿ: ಹಲವರಿಗೆ ಗಾಯ, ‘ಭಯೋತ್ಪಾದಕ ದಾಳಿ’ ಶಂಕೆ