ಚಾಮರಾಜನಗರ : ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವಲಯದ ಬಳಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ ಈ ಬೆನ್ನಲ್ಲೇ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಸ್ತೆಯಲ್ಲಿ ನಡೆದಿರುವ ರಾತ್ರಿ ಸಂಚಾರ ನಿಷೇಧಿಸಲಾಗಿದೆ
ಈ ಗಂಭೀರ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕನನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಲಾರಿಯು ಕೇರಳದಿಂದ ಗುಂಡ್ಲುಪೇಟೆ ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಈ ಮಾರ್ಗದಲ್ಲಿ ಸಂಚಾರ ಕಡಿವಾಣ ಹಾಕೋದಕ್ಕೆ ಅಧಿಕಾರಿಗಳು ಮುಂದಾಗುವ ಸಾಧ್ಯತೆಯಿದೆ.