ಬೆಂಗಳೂರು: ಇಲ್ಲಿನ ಕಂಬಾಳು ಗೊಲ್ಲರಹಟ್ಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿತ್ತು. ಸ್ಥಳಕ್ಕೆ ಎಸಿಎಫ್ ನಿಜಾಮುದ್ದೀನ್ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಮೃತ ಮಹಿಳೆಯ ಕುಟುಂಬಕ್ಕೆ 15 ಲಕ್ಷ ಪರಿಹಾರವನ್ನು ಅರಣ್ಯ ಇಲಾಖೆಯಿಂದ ನೀಡುವುದಾಗಿ ಘೋಷಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕಂಬಾಳು ಗೊಲ್ಲರಹಟ್ಟಿಯ ಬಳಿಯಲ್ಲಿ ಚಿರತೆ ದಾಳಿಯಿಂದಾಗಿ ಕರಿಯಮ್ಮ(55) ಎಂಬ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಕೂಡಲೇ ನರಭಕ್ಷಕ ಚಿರತೆಯನ್ನು ಹಿಡಿಯುವಂತೆ ಆಗ್ರಹ ಹೆಚ್ಚಾಗಿತ್ತು.
ಇಂದು ಸ್ಥಳಕ್ಕೆ ಎಸಿಎಫ್ ನಿಜಾಮುದ್ದೀನ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ಚಿರತೆಯನ್ನು ಬಂಧಿಸಲು ಬೋನ್ ಇರಿಸಲಾಗುತ್ತದೆ ಎಂಬುದಾಗಿ ಘೋಷಿಸಿದರು.
ಇನ್ನೂ ಚಿರತೆ ದಾಳಿಯಲ್ಲಿ ಮೃತ ಮಹಿಳೆಯ ಕುಟುಂಬಕ್ಕೆ 15 ಲಕ್ಷ ಪರಿಹಾರವನ್ನು ನೀಡುವುದಾಗಿ ಘೋಷಿಸಿದರು. ಕೂಡಲೇ ಮೃತ ಮಹಿಳೆಯ ಕುಟುಂಬಕ್ಕೆ ನೀಡುವುದಾಗಿ ತಿಳಿಸಿದರು.
‘ಒಂದೇ ದಿನದಲ್ಲಿ 5 ಲಕ್ಷ ನಾಗರಿಕರು ಪ್ರಯಾಣ’ : ಇತಿಹಾಸ ನಿರ್ಮಿಸಿದ ‘ಭಾರತೀಯ ವಾಯುಯಾನ’