ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಮಹಿಳಾ ಸಬ್ಇನ್ಸ್ಪೆಕ್ಟರ್ ಒಬ್ಬರು, ಆಕಸ್ಮಿಕ ಸಿನಿಮಾದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.
BIG BREAKING NEWS: ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮಕ್ಕೆ ವರುಣನ ಸಿಂಚನ
ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ಸಬ್ಇನ್ಸ್ಪೆಕ್ಟರ್ ರಮ್ಯಾ ಅವರು ಜನಸಾಮಾನ್ಯರ ಜೊತೆ ಹಾಡಿಗೆ ನೃತ್ಯ ಮಾಡಿದ್ದಾರೆ. 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕಡೂರು ಆಟದ ಮೈದಾನದಲ್ಲಿ ತಾಲೂಕು ಆಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಬಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮ ಮುಗಿದ ಬಳಿಕ ಕನ್ನಡಾಭಿಮಾನಿಗಳು ಕನ್ನಡ ಹಾಡಿಗೆ ಕುಣಿಯುತ್ತಿದ್ದರು. ಇದೇ ವೇಳೆ, ಬಂದೋಬಸ್ತ್ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಿಎಸ್ಐ. ರಮ್ಯಾ ಕೂಡ ಜನಸಾಮಾನ್ಯರ ಜೊತೆ ಸೇರಿ ಕುಣಿದು ಕುಪ್ಪಳಿಸಿದ್ದಾರೆ.